train

ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.29 ಹೈದರಾಬಾದ್‌: ವಿಶಾಖಪಟ್ಟಣಂ-ದುವ್ವಾಡ ಮೂಲಕ ಎರ್ನಾಕುಲಂಗೆ ಹೋಗುತ್ತಿದ್ದ ಟಾಟಾನಗರ್-ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನ 2 ಭೋಗಿಗಳಿಗೆ ಅಗ್ನಿ ಹೊತ್ತಿಕೊಂಡ ಪರಿಣಾಮ ಒಬ್ಬಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಹಾಗೂ ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 12:45 ರ ಸುಮಾರಿಗೆ ಈ ಬೆಂಕಿ ದುರಂತ ಘಟನೆ ನಡೆದಿದೆ.. ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿರುವ ಬಿ1 ಮತ್ತು ಎಂ2 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು […]

ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ದೀಪಾವಳಿ ಮತ್ತು ಛತ್ ಪೂಜಾ ಸಮಯದಲ್ಲಿ ಜನರ ಸಂಚಾರ ದಟ್ಟಣೆಯನ್ನು ಹಾಗೂ ದೀರ್ಘ ವಾರಾಂತ್ಯದ ಜನಸಂದಣಿಯನ್ನು ನಿಭಾಯಿಸಲು ಬೃಹತ್ ಯೋಜನೆಯನ್ನು ರೂಪಿಸಿದೆ. SWR ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಪ್ರಮುಖ ನಿಲ್ದಾಣಗಳಲ್ಲಿ 136 ವಿಶೇಷ ರೈಲುಗಳು (338 ಟ್ರಿಪ್‌ಗಳು), 540 ಹೆಚ್ಚುವರಿ ಬೋಗಿಗಳು, ವರ್ಧಿತ ಭದ್ರತೆ, ಸಹಾಯ ಕೇಂದ್ರಗಳು, ವೈದ್ಯಕೀಯ ತಂಡಗಳು ಮತ್ತು ಸುಧಾರಿತ ಪ್ರಯಾಣಿಕರ ಮಾರ್ಗದರ್ಶನ ಸೌಲಭ್ಯ ನೀಡುತ್ತಿದೆ. ರೈಲು ಅವಶ್ಯಕತೆಗಳನ್ನು

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ Read More »

ಕರಾವಳಿ

ರೈಲು ಪ್ರಯಾಣಿಕರ ಗಮನಕ್ಕೆ: ಆ.23, 24ರಂದು ಈ ರೈಲುಗಳ ಸಂಚಾರ ಬಂದ್‌

(ನ್ಯೂಸ್‌ ಕಡಬ) newskadaba.com, ಆ.19: ಆ.24ರಂದು ಅರಸೀಕೆರೆ–ಬಾಣಾವರ ಮತ್ತು ಅರಸೀಕೆರೆ–ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್‌ ಹಾಗೂ ಬ್ಲಾಕ್‌ ಇನ್‌ಸ್ಟ್ರುಮೆಂಟ್‌ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯವನ್ನು ಮರು ನಿಗದಿಪಡಿಸಲಾಗುತ್ತದೆ ಹಾಗೂ ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ. ಆ.23ರಂದು ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್‌

ರೈಲು ಪ್ರಯಾಣಿಕರ ಗಮನಕ್ಕೆ: ಆ.23, 24ರಂದು ಈ ರೈಲುಗಳ ಸಂಚಾರ ಬಂದ್‌ Read More »

ಕರ್ನಾಟಕ

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com, ಆ.16ಶಿವಮೊಗ್ಗ :  ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರ ಆಗಸ್ಟ್‌ 17(ರವಿವಾರ)ರಂದು (ರೈಲು ಸಂಖ್ಯೆ 06103) ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆಹಾಗೂ ಆಗಸ್ಟ್‌ 18ರಂದು ಶಿವಮೊಗ್ಗದಿಂದ ತಿರುನೆಲ್ವೇಲಿಗೆ (ರೈಲು ಸಂಖ್ಯೆ 06104) ಒಂದು ಟ್ರಿಪ್‌ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ. ‌ ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಡಲಿದೆ. ಸೋಮವಾರ ಮಧ್ಯಾಹ್ನ 1:00 ಗಂಟೆಗೆ

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ

(ನ್ಯೂಸ್ ಕಡಬ) newskadaba.com, ಜು. 10. ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ. ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು–ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11 (ಶುಕ್ರವಾರ) ರಂದು

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ Read More »

ಕರ್ನಾಟಕ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..!

(ನ್ಯೂಸ್ ಕಡಬ) newskadaba.com ಜ.11:  ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್  ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರತಿದಿನ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಸೇವೆ ಜ.13ರಿಂದ ಅಂದರೆ ಸೋಮವಾರದಿಂದ ಮುಂಜಾನೆ 4:15 ಕ್ಕೆ ಮೆಟ್ರೋ ಸೇವೆ ಆರಂಭಿಸಲಿದೆ. ಜನಸಂದಣಿ ಆಧರಿಸಿ ಬಿಎಂಆರ್’ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ. ನಗರಕ್ಕ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..! Read More »

ಕರ್ನಾಟಕ

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.25, ಹುಬ್ಬಳ್ಳಿ: ದೀಪಾವಳಿ ಸಂದರ್ಭದಲ್ಲಿ ಅತೀ ದಟ್ಟಣೆಯಿರುವ ಪ್ರಯಾಣಿಕರನ್ನು  ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಅ. 12. ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲ್ವೇ ಸಂಪರ್ಕ ಆರಂಭವಾಗಲಿದ್ದು, ಈ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ-ರೇಣಿಗುಂಟ-ತಿರುಪತಿ-ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರದಂದು ಆರಂಭಗೊಳ್ಳಲಿದೆ. ಈ ರೈಲು ಮುರುಡೇಶ್ವರದಿಂದ ಬುಧವಾರ ಹಾಗೂ ಶನಿವಾರ, ತಿರುಪತಿಯಿಂದ ಮಂಗಳವಾರ ಮತ್ತು ಶುಕ್ರವಾರ ವಾರಕ್ಕೆರಡು ದಿನ ಸಂಚರಿಸಲಿದೆ. ಅ.12ರ ಶನಿವಾರ ಮುರುಡೇಶ್ವರದಿಂದ ಮಧ್ಯಾಹ್ನ 3.20ಕ್ಕೆ ಹೊರಡುವ ರೈಲು 3.54ಕ್ಕೆ ಬೈಂದೂರು, ಕುಂದಾಪುರಕ್ಕೆ 4. 40, ಬಾರಕೂರು 5, ಉಡುಪಿ 5.20ಕ್ಕೆ, ಮಂಗಳೂರು

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಾವಳಿಯಿಂದ ತಿರುಪತಿಗೆ ರೈಲು ಸೇವೆ ವಿಸ್ತರಣೆ

(ನ್ಯೂಸ್ ಕಡಬ)newskadaba.com, ಅ. ಉಡುಪಿ 09: ಕರ್ನಾಟಕದ ಕರಾವಳಿಯಿಂದ ತಿರುಪತಿಗೆ ಭೇಟಿ ನೀಡುವ ಭಕ್ತರಿಗೆ ಸಿಹಿಸುದ್ದಿ ದೊರೆತಿದೆ. ಭಾರತೀಯ ರೈಲ್ವೆ ಕಾಚಿಗುಡ–ಮಂಗಳೂರು ಎಕ್ಸ್‌ಪ್ರೆಸ್ ರೈಲನ್ನು ವಿಸ್ತರಣೆ ಮಾಡಲು ಒಪ್ಪಿಗೆ ನೀಡಿದೆ. ಲೋಕಸಭೆ ಚುನಾವಣೆ 2024ರ ಸಂದರ್ಭದಲ್ಲಿ ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಕರಾವಳಿ ಭಾಗದ ಜನರ ಈ ಬಹುದಿನದ ಬೇಡಿಕೆಗೆ ಈಗ ಅನುಮೋದನೆ ದೊರೆತಿದೆ. ಈ ಕುರಿತು ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಕರಾವಳಿಯಿಂದ ತಿರುಪತಿಗೆ ರೈಲು ಸೇವೆ ವಿಸ್ತರಣೆ Read More »

ಬ್ರೇಕಿಂಗ್ ನ್ಯೂಸ್

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಬೆಂಗಳೂರು- ಮಧುರೈ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ವಂದೇ ಭಾರತ್ ರೈಲುಗಳ ಪಟ್ಟಿ: ಬೆಂಗಳೂರು- ಮಧುರೈ (ರೈಲು ನಂ. 20671/20672) ಮೀರತ್- ಲಖನೌ (ರೈಲು ನಂ. 22490/22489) ಚೆನ್ನೈ- ನಾಗರಕೋಯಿಲ್ (ರೈಲು ನಂ. 20627/20628) ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top