train

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 12. ಸಕಲೇಶಪುರ- ಬಾಳುಪೇಟೆ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ ಈ ಮಾರ್ಗದ 10 ರೈಲುಗಳ ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ.   ಆಗಸ್ಟ್ 12, 13ರಂದು ಕೆಎಸ್‌ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್, ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ. ಆಗಸ್ಟ್ 13 ರಂದು ಕಾರವಾರ -ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಆಗಸ್ಟ್ 13, […]

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!! Read More »

ಕರಾವಳಿ, ಕರ್ನಾಟಕ

ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಪ್ರಯಾಣಿಕರ ಒತ್ತಡವನ್ನು ಕಡಿಮೆಗೊಳಿಸಲು ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ತಾತ್ಕಾಲಿಕವಾಗಿ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ಗಳನ್ನು ಒದಗಿಸಲಾಗುವುದು. 2023ರ ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್‌ನಿಂದ ಹೊರಡುವ ರೈಲು (ನಂಬರ್ 01165) ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ವಿಶೇಷ ರೈಲಿಗೆ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು

ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಇವರು ಸೆ. 24 ರಂದು ಸಂಜೆ ಮನೆಯಿಂದ ಹೊರಟಿದ್ದು, ಇಂದು ಬೆಳಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು- ಮಂಗಳೂರು ರೈಲು; ಇಂದಿನಿಂದ ಮುರ್ಡೇಶ್ವರದವರೆಗೂ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಬೆಂಗಳೂರು-ಮೈಸೂರು- ಮಂಗಳೂರು ರೈಲು (16585/6) ಇಂದಿನಿಂದ (ಸೆ. 16) ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ಸಂಚರಿಸಲಿದೆ. ಈ ರೈಲು ಎಂದಿನಂತೆ ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು, ಮಂಗಳೂರಿಗೆ ಸಂಜೆ 6.35ಕ್ಕೆ ಬಂದು, ಬೆಳಿಗ್ಗೆ 6ಕ್ಕೆ ಬೆಂಗಳೂರು ತಲುಪುತ್ತದೆ. ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು ಮೈಸೂರು ಮೂಲಕ ಬೆಳಿಗ್ಗೆ 9.05ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ತಲುಪುತ್ತದೆ. ವಾರದಲ್ಲಿ ಆರು ದಿನ ಈ ರೈಲಿನ ಸೇವೆ ಇದೆ ಎಂದು

ಬೆಂಗಳೂರು- ಮಂಗಳೂರು ರೈಲು; ಇಂದಿನಿಂದ ಮುರ್ಡೇಶ್ವರದವರೆಗೂ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಚಲಿಸುತ್ತಿದ್ದ ರೈಲಿನಡಿಯಲ್ಲಿ ಆಟವಾಡುತ್ತಿದ್ದ ಮಕ್ಕಳು..!

(ನ್ಯೂಸ್ ಕಡಬ) newskadaba.com ರಾಂಚಿ, ಆ. 04. ಚಲಿಸುತ್ತಿರುವ ಗೂಡ್ಸ್‌ ರೈಲಿನಡಿಯಲ್ಲಿ ನಾಲ್ವರು ಮಕ್ಕಳು ಅಡಗಿ, ಆಟ ಆಡುತ್ತಿದ್ದ ಘಟನೆ ಜಾರ್ಖಂಡ್‌ನ‌ ಪಶ್ಚಿಮ ಸಿಂಗ್ಭೂಮ್‌ ಜಿಲ್ಲೆಯಿಂದ ವರದಿಯಾಗಿದೆ. ಸುರಕ್ಷತೆಯನ್ನು ಲೆಕ್ಕಿಸದೇ ಮಕ್ಕಳು ಚಲಿಸುತ್ತಿರುವ ರೈಲಿನಡಿಯಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಗೂಡ್ಸ್‌ ರೈಲು ನಿಂತ ವೇಳೆ ತಪಾಸಣೆ ನಡೆಸುತ್ತಿದ್ದ ಕಾರ್ಮಿಕ ಈ ದೃಶ್ಯವನ್ನು ಗಮನಿಸಿದ್ದು, ಈ ಕುರಿತು ಆತ ವಿಡಿಯೋ ಮಾಡಿದ್ದಲ್ಲದೇ ಸಂಬಂಧಪಟ್ಟ ರೈಲು ಮತ್ತು ಗಣಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.   ಈ

ಚಲಿಸುತ್ತಿದ್ದ ರೈಲಿನಡಿಯಲ್ಲಿ ಆಟವಾಡುತ್ತಿದ್ದ ಮಕ್ಕಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 23. ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಎಂದು ಗುರುತಿಸಲಾಗಿದೆ. ಎಲಿಮಲೆಯ ರಬ್ಬರ್ ಪ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದೆನ್ನಲಾಗಿದ್ದು, ಇದೀಗ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳಗಾವಿ- ಮೈಸೂರು ಡೈರೆಕ್ಟ್ ಟ್ರೈನ್‌ಗೆ ಬೇಡಿಕೆ ➤ ರೈಲು ಸಂಚಾರ ಆರಂಭಿಸುವಂತೆ ಆಗ್ರಹ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಜ.27. ಕುಂದಾನಗರಿ ಬೆಳಗಾವಿಯಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರತಿನಿತ್ಯ ನೂರಾರು ಜನ ಪ್ರಯಾಣಿಸುತ್ತಿದ್ದರೂ ಈ ಮಾರ್ಗದಲ್ಲಿ ರೈಲು ವ್ಯವಸ್ಥೆ ಸಮಪರ್ಕವಾಗಿಲ್ಲ. ಬೆಳಗಾವಿ- ಮೈಸೂರು ನಡುವೆ ಪ್ರತಿನಿತ್ಯ ರಾತ್ರಿ ರೈಲು ಸಂಚಾರ ಆರಂಭಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ. ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಮೊದಲಿಂದಲೂ ಬೆಳಗಾವಿ ಜಿಲ್ಲೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಮೈಸೂರಿನಲ್ಲಿ ಐಟಿ, ಬಿಟಿ ಉದ್ಯಮ ಅಭಿವೃದ್ಧಿ ಹೊಂದಿದ ಬಳಿಕ ಉದ್ಯೋಗಿಗಳಿಗೂ ಮೈಸೂರು ನೆಚ್ಚಿನ ತಾಣವಾಗಿದ್ದು, ಬೆಳಗಾವಿಯಲ್ಲಿ ಎಂಜಿನಿಯರಿಂಗ್‌ ಕಾಲೇಜುಗಳು

ಬೆಳಗಾವಿ- ಮೈಸೂರು ಡೈರೆಕ್ಟ್ ಟ್ರೈನ್‌ಗೆ ಬೇಡಿಕೆ ➤ ರೈಲು ಸಂಚಾರ ಆರಂಭಿಸುವಂತೆ ಆಗ್ರಹ Read More »

ಕರ್ನಾಟಕ

ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.21. ಚಳಿಗಾಲದ ಅವಧಿಗಾಗಿ ಜನವರಿ ಮಾಸಾಂತ್ಯ ತನಕ ಆರಂಭಿಸಲಾದ ಮುರುಡೇಶ್ವರ- ಪಡೀಲ್​ ಬೈಪಾಸ್​- ಯಶವಂತಪುರ ಸಾಪ್ತಾಹಿಕ ಸ್ಪೆಷಲ್​ ಎಕ್ಸ್​ಪ್ರೆಸ್​ (06563/06564) ರೈಲನ್ನು ಕರಾವಳಿಯ ಜನರ ಬೇಡಿಕೆಯಂತೆ ಮೇ ತಿಂಗಳ ಕೊನೆಯವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಾರಕ್ಕೊಮ್ಮೆ ಯಶವಂತಪುರದಿಂದ ಹೊರಡುವ ರೈಲು ಮರುದಿನ ಮಧ್ಯಾಹ್ನ 1 ಗಂಟೆಗೆ ಮುರ್ಡೇಶ್ವರ ತಲುಪುತ್ತಿದೆ. ಮುರ್ಡೇಶ್ವರದಿಂದ ಹೊರಟು ಮರುದಿನ ಮುಂಜಾನೆ 4ಕ್ಕೆ ಯಶವಂತಪುರ ತಲುಪುತ್ತಿದೆ. ವಾರಾಂತ್ಯ ಬೆಂಗಳೂರಿನಿಂದ ರಾತ್ರಿ ತಡವಾಗಿ ಹೊರಡುವ ಕಾರಣದಿಂದ ಬೆಂಗಳೂರಿನಲ್ಲಿ ಇರುವ

ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.26. ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳು ಗ್ರಾಮದ ಸಮೀಪ ಸೋಮವಾರ ನಡೆದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ರಾತ್ರಿಯಾದರು ಮನೆಗೆ ವಾಪಸ್ ಬಂದಿರಲಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್‍ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ
Scroll to Top