training

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 17. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಹೊಯಿಗೆಬಜಾರ್‍ ನ ಆವರಣದಲ್ಲಿರುವ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಸಚಿವಾಲಯದ ಅಧೀನದಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ ನ ಪ್ರಾಯೋಜಿತ ಯೋಜನೆಯಾದ ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃಧ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಲ್ಲಿ ನವೆಂಬರ್ ತಿಂಗಳ 3ನೇ ವಾರದಲ್ಲಿ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯಲ್ಲಿ ಅಕ್ವೇರಿಯಂ ಜೋಡಣೆ, ನಿರ್ವಹಣೆ, ಅಲಂಕಾರಿಕಾ ಮೀನುಗಳ […]

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಸಂಸ್ಥೆಯಲ್ಲಿ ಬ್ಯೂರೋ ಓಫ್ ಎನರ್ಜಿ ಎಫಿಷಿಯೆನ್ಸಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಇವರ ಸಹಯೋಗದೊಂದಿಗೆ ಆಗಸ್ಟ್ 30ರಂದು “ಇಂಧನ ದಕ್ಷತಾ ಕ್ರಮಗಳು” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪಂಪ್/ಉಪಕರಣ ತಂತ್ರಜ್ಞರಿಗೆ ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಕೆಜಿಟಿಟಿಐ, ಸಂಸ್ಥೆಯ ನಿರ್ದೇಶಕರಾದ ಗಿರಿಧರ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಾಗತಿಕ ತಾಪಮಾನ ಏರಿಕೆ ಮತ್ತು ಅದನ್ನು

ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಆಗಸ್ಟ್ ನಲ್ಲಿ ಸಿಹಿನೀರು ಮುತ್ತು ಕೃಷಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮೀನುಗಾರಿಕೆ ಇಲಾಖೆ ವತಿಯಿಂದ 2023ರ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಮೀನು ಕೃಷಿಕರು ಹಾಗೂ ಸಾರ್ವಜನಿಕರು ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸುವಂತೆ ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ ನಲ್ಲಿ ಸಿಹಿನೀರು ಮುತ್ತು ಕೃಷಿ ತರಬೇತಿ Read More »

ಕರಾವಳಿ

ತಾರಸಿ ತೋಟದ ಕುರಿತು ಜು.15ರಂದು ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,  ಜು. 12.  ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) (ಸಂಯೋಜಕರು:ಬ್ಯಾಂಕ್ ಆಫ್ ಬರೋಡ) ಹಾಗೂ ಸಿರಿ ತೋಟಗಾರಿಕೆ ಸಂಘದ (ರಿ) ಜಂಟಿ ಸಹಯೋಗದಲ್ಲಿ ಇದೇ ಜು.15ರ ಗುರುವಾರದಂದು ಬೆಳಿಗ್ಗೆ 10 ಗಂಟೆಯಿಂದ ತಾರಸಿ ತೋಟ, ಕೈತೋಟ ಮತ್ತು ಗ್ರಾಪ್ಟಿಂಗ್ ಕುರಿತು ಉಚಿತ ತರಬೇತಿ ನಗರದ ಜ್ಯೋತಿ ಸರ್ಕಲ್ ಬಳಿಯಿರುವ ಬ್ಯಾಂಕ್ ಆಫ್ ಬರೋಡ ಬಿಲ್ಡಿಂಗ್ ನ, 5ನೇ ಮಹಡಿಯಲ್ಲಿರುವ, ವಿಜಯ ಟವರ್ಸ್ ನಲ್ಲಿ ನಡೆಯಲಿದೆ. ಆಸಕ್ತರು ಜು.14ರೊಳಗೆ ನಗರದ ಬೆಂದೂರ್‍ವೆಲ್ ನಲ್ಲಿರುವ ಸಿರಿ ತೋಟಗಾರಿಕೆ

ತಾರಸಿ ತೋಟದ ಕುರಿತು ಜು.15ರಂದು ಉಚಿತ ತರಬೇತಿ Read More »

ಕರಾವಳಿ

ಹೊಸ ಶಾಸಕರುಗಳಿಗೆ ಇಂದಿನಿಂದ ತರಬೇತಿ ಶಿಬಿರ ➤ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. 16ನೇ ವಿಧಾನಸಭೆಯ ನೂತನ ಶಾಸಕರಿಗೆ ಇಂದಿನಿಂದ ಬೆಂಗಳೂರಿನ ನೆಲಮಂಗಲದ ಮಹದೇವಪುರದ ಕ್ಷೇಮವನದಲ್ಲಿ ಮೂರು ದಿನಗಳವರೆಗೆ (ಜೂ. 26 ರಿಂದ ಜೂ.28) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ

ಹೊಸ ಶಾಸಕರುಗಳಿಗೆ ಇಂದಿನಿಂದ ತರಬೇತಿ ಶಿಬಿರ ➤ ಸಿಎಂ ಸಿದ್ದರಾಮಯ್ಯ ಉದ್ಘಾಟನೆ Read More »

ಕರ್ನಾಟಕ

ಇಂದಿನಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ರಾಜ್ಯದ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.   ಇಂದಿನಿಂದ (ಜೂ. 26) ಆರಂಭವಾಗಲಿರುವ ನೂತನ ಸ್ಪೀಕರ್‌ ಯುಟಿ ಖಾದರ್‌ ನೇತೃತ್ವದಲ್ಲಿ ನಡೆಯುವ ಈ ಶಿಬಿರಕ್ಕೆ ಸಿಎಂ ಸಿದ್ದರಾಮಯ್ಯವರು  ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಲಿದ್ದಾರೆ. ಈ ಬಾರಿ ನೂತನವಾಗಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದು, ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ

ಇಂದಿನಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ Read More »

ಕರ್ನಾಟಕ

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ ಮತ್ತು 3ಬಿಗೆ ಸೇರಿದ ಕಾನೂನು ಪದವೀಧರರಿಂದ 2023ರ ಜುಲೈ 5ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು 15 ವರ್ಷಗಳ ಕಾಲ ಕಡಿಮೆ ಅಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top