trump

ಭಾರತದ ಮೇಲೆ 10% ಸುಂಕ ಹೇರಿದ ಟ್ರಂಪ್ 60 ದೇಶಗಳ ವಿರುದ್ಧ ಹೊಸ ತೆರಿಗೆ ಅಸ್ತ್ರ!

(ನ್ಯೂಸ್ ಕಡಬ) newskadaba.com ಜು. 24. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸುಂಕ ಸಮರದ ನೀತಿಯನ್ನು ಮುಂದುವರಿಸಿದ್ದು, ಭಾರತ, ಚೀನಾ ಹಾಗೂ ಬ್ರಿಟನ್ ಸೇರಿದಂತೆ 60 ದೇಶಗಳ ಆಮದು ಸರಕುಗಳ ಮೇಲೆ ಹೊಸದಾಗಿ ಸುಂಕ ವಿಧಿಸಿದ್ದಾರೆ. ಬಲವಂತದ ಕಾರ್ಮಿಕ ಪದ್ಧತಿಯನ್ನು (Forced Labor) ತಡೆಯಲು ಸೂಕ್ತ ಕಾನೂನು ಜಾರಿಗೆ ತಂದಿಲ್ಲ ಎಂದು ಆರೋಪಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದೇಶಗಳಿಂದ ಬರುವ ಸರಕುಗಳ ಮೇಲೆ ಶೇ. 10 ರಿಂದ ಶೇ. 12.5 ರಷ್ಟು ತೆರಿಗೆ ವಿಧಿಸಲಾಗಿದೆ. […]

ಭಾರತದ ಮೇಲೆ 10% ಸುಂಕ ಹೇರಿದ ಟ್ರಂಪ್ 60 ದೇಶಗಳ ವಿರುದ್ಧ ಹೊಸ ತೆರಿಗೆ ಅಸ್ತ್ರ! Read More »

ಅಂತರ್ರಾಷ್ಟ್ರೀಯ ನ್ಯೂಸ್

‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.08: ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್‌(1.77 ಲಕ್ಷ ರೂ.) ಡಿವಿಡೆಂಡ್‌ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಟ್ರಂಪ್‌ , 1 ಸಾವಿರದಿಂದ 2 ಸಾವಿರ ಡಾಲರ್‌ ವರೆಗೆ ಡಿವಿಡೆಂಡ್‌ ನೀಡುತ್ತೇನೆ ಎಂದು ಹೇಳಿದ್ದಾರೆ. ಬಹಳಷ್ಟು ಜನ ನಾನು ತೆರಿಗೆ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಆದರೆ ಈಗ ನಮ್ಮ ತೆರಿಗೆ ಸಂಗ್ರಹದಲ್ಲಿ ಬಂದ ಲಾಭಾಂಶವನ್ನು ಡಿವಿಡೆಂಡ್‌ ಜನರಿಗೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರಿಗೆ ಮತ್ತು

‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಅ.11:  ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದೆ. ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ಸಹ ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.100 ರಷ್ಟು ಸುಂಕವು ನವೆಂಬರ್ 1, 2025 ರಿಂದ ಜಾರಿಗೆ ಬರಲಿದೆ ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕವು ಚೀನಾದ ಮೇಲೆ ಬಲವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು!

(ನ್ಯೂಸ್‌ ಕಡಬ) newskadaba.com, ಆ.26 : ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇರುತ್ತದೆ. ಈಗ ಟ್ರಂಪ್ ಪ್ರಸ್ತಾಪಿಸಿರುವ ಯುದ್ಧ ಇಲಾಖೆ ಸುದ್ದಿಯಲ್ಲಿದೆ. ಅಮೆರಿಕದ ರಕ್ಷಣಾ ಇಲಾಖೆಯನ್ನು “ಯುದ್ಧ ಇಲಾಖೆ” ಎಂದು ಮರುನಾಮಕರಣ ಮಾಡುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಕ್ಷಣಾ ಇಲಾಖೆ ಎಂದು ಹೇಳುವುದಕ್ಕಿಂತಲೂ ಯುದ್ಧ ಇಲಾಖೆ (Department Of War) ಎನ್ನುವುದು ಹೆಚ್ಚು ಬಲವಾಗಿ ಧ್ವನಿಸುತ್ತದೆ ಎಂಬುದು ಟ್ರಂಪ್ ಅಭಿಪ್ರಾಯ. ಅಮೆರಿಕ ಅಧ್ಯಕ್ಷರು

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು! Read More »

ಕರಾವಳಿ

ಭಾರತದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳದಂತೆ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

(ನ್ಯೂಸ್‌ ಕಡಬ) newskadaba.com, ಆ.07: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂಥ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್‌ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್‌ಗೆ ಸಲಹೆ ನೀಡಿದ್ದಾರೆ. ರಷ್ಯಾದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಮುಂದಿನ 24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ ಮಾಡುವುದಾಗಿ ಟ್ರಂಪ್‌ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ನಿಕ್ಕಿ ಹ್ಯಾಲಿ ಪ್ರತಿಕ್ರಿಯಿಸಿದ್ದು, ಟ್ರಂಪ್‌ ಅವರ ಪ್ರಸ್ತಾಪಗಳು ನಿರ್ಣಾಯಕ

ಭಾರತದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳದಂತೆ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ Read More »

ರಾಷ್ಟ್ರೀಯ ನ್ಯೂಸ್

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 30. ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಗಸ್ಟ್ 1ರಿಂದ ಭಾರತದ ಮೇಲೆ ಶೇ 25 ಟ್ಯಾರಿಫ್ ಹಾಗೂ ಹೆಚ್ಚುವರಿ ದಂಡವನ್ನು ಹಾಕಲಾಗುವುದು. ಭಾರತ ಅಧಿಕ ಟ್ಯಾರಿಫ್ ವಿಧಿಸುತ್ತಿರುವುದು, ಹಣಕಾಸೇತರ ವ್ಯಾಪಾರ ನಿರ್ಬಂಧ ಹೊಂದಿರುವುದು, ರಷ್ಯಾ ಇಂಧನ ಖರೀದಿಸುತ್ತಿರುವುದು, ಈ ಮೂರು ಅಂಶಗಳನ್ನು ಆಧಾರವಾಗಿಟ್ಟುಕೊಂಡು ಭಾರತದ ಮೇಲೆ

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಕೊಟ್ಟ ಮಾತನ್ನ ನಾವು ಈಡೇರಿಸಿದ್ದೇವೆ ಎಂದ ಟ್ರಂಪ್

(ನ್ಯೂಸ್ ಕಡಬ) newskadaba.com ಮಾ. 19 : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. ಇದೀಗ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ಯಾಪ್ಸುಲ್ ಮೂಲಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿರುವ ಬಗ್ಗೆ ಮಾತನಾಡಿದ ಅವರು, ನಾನು ಅಧಿಕಾರಕ್ಕೆ ಬಂದಾಗ ಅವರನ್ನು ಮರಳಿ ಕರೆ ತರಬೇಕು ಎಂದು

ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಕೊಟ್ಟ ಮಾತನ್ನ ನಾವು ಈಡೇರಿಸಿದ್ದೇವೆ ಎಂದ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಏ.05. ಲೈಂಗಿಕ ಹಗರಣ ಮುಚ್ಚಿಡಲು ಪೋರ್ನ್ ಸ್ಟಾರ್ಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (76) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಟ್ರಂಪ್ ಮ್ಯಾನ್ಹಾಟನ್ ಕೋರ್ಟ್ಗೆ ಶರಣಾಗಿದ್ದರು. ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ ಹಾಗೂ ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ. ಬಂಧನದ ಹಿನ್ನಲೆ ನ್ಯೂಯಾರ್ಕ್ನಲ್ಲಿ ಗಲಭೆ ನಡೆಯಬಹುದು ಎಂಬ ಅನುಮಾನದ ಮೇರೆಗೆ ಹೈ ಅಲರ್ಟ್

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top