tyre blast

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಂಕ್​ಕಾಂಗ್​, ಜೂ. 25. ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಂಕ್​ಕಾಂಗ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.   ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಹಾಂಗ್​ಕಾಂಗ್​ನಿಂದ ಲಾಸ್​ ಏಂಜಲೀಸ್​ಗೆ ಹೊರಟಿದ್ದ ಈ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾಪು, ಜ. 12. ಅಡಿಕೆ ಸಾಗಾಟದ ಟೆಂಪೋ ವಾಹನವೊಂದು ರಾ.ಹೆ 66ರ ಫ್ಲೈ ಓವರ್ ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಸಿದ್ದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಟೆಂಪೋದ ಟಯರ್ ಬ್ಲಾಸ್ಟ್ ಆಗಿದ್ದು, ಪರಿಣಾಮ ನಿಯಂತ್ರಣ ತಪ್ಪಿದ ಟೆಂಪೋ ಮಗುಚಿಬಿದ್ದಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top