ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
(ನ್ಯೂಸ್ ಕಡಬ) newskadaba.com ಅ.19 ಉಡುಪಿ: ಬಿಜೆಪಿ ತನ್ನ ಅತಿಯಾದ ಆತ್ಮವಿಶ್ವಾಸದಿಂದ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಫಲಿತಾಂಶ ಹಾಗೂ ಮತದಾರರ ಮನಸ್ಥಿತಿಯನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಗ್ರಾಮ ಪಂಚಾಯಿತಿ ಬಲವರ್ಧನೆಗೆ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ನಡೆಸಿದ್ದು, ಈ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸಲು ಈ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ, ನಾವು ನಮ್ಮ ಅಭ್ಯರ್ಥಿಯ ಯಶಸ್ಸಿಗೆ ಬೇಕಾದ ಎಲ್ಲಾ […]

