ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ
(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್


