Udupi

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.26. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನವೊಂದು ರಸ್ತೆ ಬಲಭಾಗಕ್ಕೆ ಬಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ […]

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ Read More »

ಕರಾವಳಿ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22. ಇಲ್ಲಿನ ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದ್ದು, ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಾಳೆ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ Read More »

ಕರಾವಳಿ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ ಬಂದು ರಜತ ಪರ್ವದಲ್ಲಿರುವ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದ ಸಂಸ್ಥೆ, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ. ಯಕ್ಷಗಾನ ಕಲಾರಂಗ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000 ರೂ. ಹೆಚ್ಚಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ನ.17ರ ರವಿವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಅ.19 ಉಡುಪಿ:  ಬಿಜೆಪಿ ತನ್ನ ಅತಿಯಾದ ಆತ್ಮವಿಶ್ವಾಸದಿಂದ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಫಲಿತಾಂಶ ಹಾಗೂ ಮತದಾರರ ಮನಸ್ಥಿತಿಯನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಗ್ರಾಮ ಪಂಚಾಯಿತಿ ಬಲವರ್ಧನೆಗೆ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ನಡೆಸಿದ್ದು, ಈ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸಲು ಈ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ, ನಾವು ನಮ್ಮ ಅಭ್ಯರ್ಥಿಯ ಯಶಸ್ಸಿಗೆ ಬೇಕಾದ ಎಲ್ಲಾ

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಮನೆ ಬಿಟ್ಟು ಬಂದ ಬಾಲಕಿಯರಿಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಘಟನೆ ಅಕ್ಟೋಬರ್ 18 ರಂದು ಮಲ್ಪೆ ಬೀಚ್‌ನಲ್ಲಿ ನಡೆದಿದೆ. ರಕ್ಷಿಸಲಾದ ಮಕ್ಕಳು ಹಾವೇರಿಯವರು ಎಂದು ತಿಳಿದುಬಂದಿದೆ. ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯನ್ನು ಹೊಂದಿದ್ದರೂ ಪೋಷಕರ ಬೆಂಬಲವಿಲ್ಲದೆ ಅಸಹಾಯಕರಾಗಿದ್ದೇವೆ. ಹೀಗಾಗಿ ತಮ್ಮ ವಿದ್ಯಾಭ್ಯಾಸಕ್ಕೆ ಹಣ ಸಂಗ್ರಹಿಸುವ ಉದ್ದೇಶದಿಂದ ಹಾವೇರಿಯಿಂದ ಉಡುಪಿಗೆ ಬಂದಿದ್ದೇವೆ ಎಂದು ಬಾಲಕಿಯರು ತಿಳಿಸಿದ್ದಾರೆ. ಬೀಚ್‌ನಲ್ಲಿ ಈ ಇಬ್ಬರು ಬಾಲಕಿಯರ ಚಲನವಲನಗಳು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಹೀಗಾಗಿ ಬೀಚ್ ಗಸ್ತು ಸಿಬ್ಬಂದಿ

ಉಡುಪಿ: ಮನೆ ಬಿಟ್ಟು ಬಂದ ಬಾಲಕಿಯರಿಬ್ಬರ ರಕ್ಷಣೆ Read More »

ಕರಾವಳಿ

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ.

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ Read More »

ಕರಾವಳಿ

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದೆ ಈ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡಬಾರದು. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ

ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಅ.19, ಉಡುಪಿ: ಸೀಟಿನ ಕೆಳಗೆ ಶೇಖರಣೆಯಲ್ಲಿದ್ದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಚಿಟ್ಪಾಡಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಸ್ಕೂಟರ್ ಸವಾರ ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿ ವಾಹನದ ಸೀಟಿನ ಕೆಳಗೆ ಸಂಗ್ರಹಿಸಿದ್ದರು. ಬಳಿಕ ಅವರು ಸ್ಕೂಟರ್ ಅನ್ನು ಕಿಕ್-ಸ್ಟಾರ್ಟ್ ಮಾಡಲು ಪ್ರಯತ್ನಿಸಿದ್ದು, ಇಂಜಿನ್‌ನಿಂದ ಸೋರಿಕೆಯಾದ ಕಿಡಿಯು ಸೀಟ್ ಕೆಳಗೆ ಸೋರಿಕೆಯಾಗಿದ್ದ ಪೆಟ್ರೋಲ್‌ಗೆ ತಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ಬೆಂಕಿಗೆ

ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ Read More »

ಕರಾವಳಿ
Scroll to Top