ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ
(ನ್ಯೂಸ್ ಕಡಬ) newskadaba.com ಅ.24. ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ […]

