ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್-ಪ್ರೆಸ್ ರೈಲು ಸಂಚಾರ ಆರಂಭ – ಸಂಸದರ ಮನವಿಗೆ ರೈಲ್ವೇ ಸಚಿವರ ಭರವಸೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಅಕ್ಟೋಬರ್ ತಿಂಗಳ ಅಂತ್ಯದೊಳಗೆ ನಗರದಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸುವುದಾಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ. ಹೊಸದಿಲ್ಲಿಯಲ್ಲಿ ಶುಕ್ರವಾರದಂದು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದಾಗ ಈ ಭರವಸೆ ಲಭಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬೆಂಗಳೂರು-ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಸಲ್ಲಿಸಲಾಗಿರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಒತ್ತಾಯಿಸಿರುವೆ. ಇದಕ್ಕೂ ಸಚಿವರು ಸ್ಪಂದಿಸಿದ್ದು, […]
