ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ನಿಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವರ್ಮಾ ಅವರಿಗೆ 76 ವರ್ಷ ವಯಸ್ಸಾಗಿದ್ದು, ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ. ಬಿಕೆಎಸ್ ವರ್ಮಾ ಅವರಿಗೆ ಬೆಂಗಳೂರು ವಿವಿಯಿಂದ 2011ರಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿತ್ತು.  

ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ನಿಧನ Read More »

ಕರ್ನಾಟಕ