Vitla

ಹಳ್ಳಕ್ಕೆ ಕೆಮಿಕಲ್ ಮಿಶ್ರಿತ ನೀರು ಬಿಡಲು ಯತ್ನ – ಟ್ಯಾಂಕರ್ ಸಮೇತ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.27. ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿದ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಈ ಹಳ್ಳಕ್ಕೆ ಪ್ರತಿ ದಿನ ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಹರಿಬಿಡುತ್ತಿದ್ದು, ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಹಳ್ಳಕ್ಕೆ ಕೆಮಿಕಲ್ ಮಿಶ್ರಿತ ನೀರು ಬಿಡಲು ಯತ್ನ – ಟ್ಯಾಂಕರ್ ಸಮೇತ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಮೆಂಟ್ ಸಾಗಾಟದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ನಾಯಿಯ ಜೀವ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಸಾಗಾಟದ ಲಾರಿ ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಕೊಟ್ಟಾರಿ ಕಟ್ಟೆ ಎಂಬಲ್ಲಿ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಕಲ್ಲಡ್ಕದಿಂದ ಪೆರ್ಲ ಕಡೆ ಸಿಮೆಂಟ್ ಸಾಗಾಟದ ಲಾರಿ ನಾಯಿಯೊಂದಕ್ಕೆ ಢಿಕ್ಕಿ ಯಾಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಘಟನಾ ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು

ಸಿಮೆಂಟ್ ಸಾಗಾಟದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ

(ನ್ಯೂಸ್ ಕಡಬ)newskadaba.com ವಿಟ್ಲ, ಜು.22. ಮಣ್ಣು ತುಂಬಿದ್ದ ವಾಹನಕ್ಕೆ ಇಕೋ ಢಿಕ್ಕಿಯಾದ ಘಟನೆ ಉಕ್ಕುಡ – ಕನ್ಯಾನ ರಸ್ತೆಯಲ್ಲಿ ಇಂದು ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತದ್ದ ಮಣ್ಣಿನ ಲಾರಿಯು ಇಕೋ ವಾಹನಕ್ಕೆ ಡಿಕ್ಕಿಯಾಗಿ ವಾಹನ ಜಖಂಗೊಂಡಿದ್ದು, ಯಾರೂ ಗಾಯಗೊಂಡಿಲ್ಲ ಎಂದು ವರದಿ ತಿಳಿಸಿದೆ.

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಕೇರಳಕ್ಕೆ ಅಕ್ರಮ ಗೋಸಾಗಾಟ..! ➤ ಪಿಕಪ್‌ ತಡೆದು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.31. ಕೇರಳಕ್ಕೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪಿಕಪ್‌ ಅನ್ನು ಹಿಂ.ಜಾ.ವೇ. ಕಾರ್ಯಕರ್ತರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆಯಲ್ಲಿ ವಿಟ್ಲ ಸಮೀಪದ ಪುಣಚ ದೇವಿ ನಗರ ಬಳಿ ಅಕ್ರಮ ಗೋ ಸಾಗಾಟ ಪತ್ತೆಯಾಗಿದೆ. ನಿರಂತರ ಗೋಸಾಗಾಟ ಮಾಡುವ ಮಹೇಶ್ವರ ಪಿಕಪ್ ಹಾಗೂ ಸುಂದರ ಎಂಬಾತ ಪೊಲೀಸ್ ವಶಕ್ಕೆ ನೀಡಲಾಗಿದೆ. ಗೋಸಾಗಾಟಕ್ಕೆ ಪರವಾನಿಗೆ ಮಾಡಿ ಸಾಗಾಟ ಮಾಡುವುದರಲ್ಲಿ ನಿಪುಣನಾಗಿರುವ ಈತ ಒಂದು ವಾರದ

ವಿಟ್ಲ: ಕೇರಳಕ್ಕೆ ಅಕ್ರಮ ಗೋಸಾಗಾಟ..! ➤ ಪಿಕಪ್‌ ತಡೆದು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು, ಪತಿಯನ್ನು ತೊರೆದು ತಂದೆ ಮನೆಯಲ್ಲೇ ವಾಸವಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಾ.15ರಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮನೆಗೆ ನುಗ್ಗಿ, ಚಿನ್ನಾಭರಣ – ನಗದು ಕಳವು !

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.22. ಮನೆಯ ಬಾಗಿಲು ಒಡೆದು ಸುಮಾರು 1,11,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಝಬೈದಾ ಅವರ ಮನೆಗೆ ಕಳ್ಳರು ಮನೆಯ ಆರ್‌ಸಿ‍ಸಿ ಛಾವಣಿಯ ದ್ವಾರವನ್ನು ಒಡೆದು ಒಳಗೆ ಪ್ರವೇಶಿಸಿ ಮಲಗುವ ಕೋಣೆಯಲ್ಲಿದ್ದ ಗಾಡ್ರೇಜ್‌ ಮುರಿದು ಅದರಲ್ಲಿದ್ದ 8 ಗ್ರಾಂ ತೂಕದ ಮಗುವಿನ ಕೈ ಚೈನ್, ಸುಮಾರು 8 ಗ್ರಾಂ ತೂಕದ ಮಗುವಿನ ಕಾಲು ಚೈನ್, ಸುಮಾರು 12 ಗ್ರಾಂ ತೂಕದ ಕುತ್ತಿಗೆಯ ಸರ,

ವಿಟ್ಲ: ಮನೆಗೆ ನುಗ್ಗಿ, ಚಿನ್ನಾಭರಣ – ನಗದು ಕಳವು ! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.06. ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ನಡೆದಿದೆ. ವಿಟ್ಲ ಕಾಂತಡ್ಕ ಶಾಲೆಯ ಸಮೀಪದ‌ ನಿವಾಸಿ ರಹೀಮ್ ಶಾನ್ ಅವರ ಮನೆಯಲ್ಲಿ ಅವರ ಕುಟುಂಬದ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು.‌ ಮನೆಗೆ ಬರುವಾಗ ಸರಿ ಸುಮಾರು 12 ಗಂಟೆಯಾಗಿದೆ. ಮನೆಗ ಬಂದು ನೋಡಿದಾಗ ಹಿಂಬದಿಯ ಬಾಗಿಲು ತೆರೆದಿರುವುದು ಕಂಡು ಬಂದಿದೆ.  ಮನೆಗೆ ನುಗ್ಗಿದ ಕಳ್ಳರು ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ !

(ನ್ಯೂಸ್ ಕಡಬ)newskadaba.com ವಿಟ್ಲ, ಜ.30. ಕನ್ಯಾನ ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಕೇರಳ ಮೂಲದ ವಿನಯನ್ (58) ಮೃತರು ಎಂದು ಗುರುತಿಸಲಾಗಿದೆ. ವಿನಯನ್ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ ! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ವಿಟ್ಲ, ಜ.28. ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಶಟರ್‌ ತುಂಡರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ವಾಹನ ಸಹಿತವಾಗಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಾರೆಬೆಟ್ಟು ನಿವಾಸಿ ಟಿ.ಕೆ. ಅಬ್ದುಲ್‌ ಸಲಾಂ (37) ಬಂಧಿತ ಆರೋಪಿ ಎನ್ನಲಾಗಿದೆ. ಬೈಕ್‌ ಹಾಗೂ ಕಾರಿನಲ್ಲಿ ಆಗಮಿಸಿ ವಿಟ್ಲಪಟ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಮುಖ್ಯ ಶಟರ್‌ ಅನ್ನು ಗ್ಯಾಸ್‌ ಕಟ್ಟರ್‌ ನಿಂದ ತುಂಡರಿಸಿ ದರೋಡೆಗೆ ವಿಫ‌ಲ ಯತ್ನ

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ವ್ಯಾಪಾರಿಗೆ ಹಲ್ಲೆ ಪ್ರಕರಣ ➤  ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಂದರ್

(ನ್ಯೂಸ್ ಕಡಬ)newskadaba.com ವಿಟ್ಲ, ಜ.25. ಜಾತ್ರೆಯ ಸಂತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪ್ರಮುಖ ಆರೋಪಿ ಗಣೇಶ್ ಕಡಂಬುನನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಹೆಚ್.ಇ ನಾಗರಾಜ್ ಇವರ ನೇತೃತ್ವದಲ್ಲಿ

ವಿಟ್ಲ: ವ್ಯಾಪಾರಿಗೆ ಹಲ್ಲೆ ಪ್ರಕರಣ ➤  ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಂದರ್ Read More »

ಕರಾವಳಿ
Scroll to Top