ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾಳಿಯಲ್ಲಿ ಭಾರೀ ಮಳೆಯಾಗುವ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ನಾಗರೀಕರು ಸಮುದ್ರಕ್ಕೆ ತೆರಳದಂತೆ ಹಾಗೂ ಅಪಾಯಕಾರಿ ವಿದ್ಯುತ್ ಕಂಬ, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಮತ್ತು ತಗ್ಗು ಪ್ರದೇಶಗಳಲ್ಲಿ, ಪ್ರವಾಹ […]
