yenithadka

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ಇಲ್ಲಿನ ಕೊೖಲ ಗ್ರಾಮದ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶಾಸಕರಾದ ಎಸ್. ಅಂಗಾರ ಅವರು ಚಾಲನೆ ನೀಡಿ ಬಳಿಕ ಊರಿನ ಹಿರಿಯ ನಾಗರೀಕರಾದ ಐತ್ತಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್ ಗೌಡ, ತೇಜಸ್ವಿನಿ ಶೇಖರ ಗೌಡ, ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ […]

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ Read More »

ಕರಾವಳಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.4. ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಮುಖ್ಯವಾಗಿ ಗರ್ಭಿಣಿ, ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ ಮಹತ್ವದ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ(1) ಅಂಗನವಾಡಿಯಲ್ಲಿ ಮಾತೃಪೂರ್ಣ ಯೋಜನೆ ಸೋಮವಾರ ಆರಂಭಗೊಂಡಿತ್ತು. ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ Read More »

ಕರಾವಳಿ

ಕೊೖಲ ಗ್ರಾ.ಪಂ.ಮಹಿಳಾ ಗ್ರಾಮಸಭೆ ► ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಕೊೖಲ ಗ್ರಾ.ಪಂ.ನ 2016-17ನೇ ಸಾಲಿನ ಮಹಿಳಾ ಗ್ರಾಮಸಭೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ವೇದಾವತಿಯವರಿಗೆ ಸನ್ಮಾನ ಕಾರ್ಯಕ್ರಮ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಮಾತನಾಡಿ, ಮಹಿಳೆಯರೂ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತಾಗಬೇಕು. ಮಹಿಳೆಯರಿಗೆ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ತಾ.ಪಂ.ಸದಸ್ಯೆ ಜಯಂತಿ ಆರ್.ಗೌಡ ಮಾತನಾಡಿ, ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಮೀಸಲಾತಿ ಇದ್ದರೂ ಸಮಾಜದಲ್ಲಿ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಹಿಳೆಯರಿಗೆ ಕಾನೂನು ವಿಷಯಗಳ

ಕೊೖಲ ಗ್ರಾ.ಪಂ.ಮಹಿಳಾ ಗ್ರಾಮಸಭೆ ► ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ Read More »

ಕರಾವಳಿ

ಏಣಿತಡ್ಕ ಶಿರಾಡಿ ದೈವಸ್ಥಾನಕ್ಕೆ ಶಾಸಕರ ಭೇಟಿ ► ಕಾಮಗಾರಿ ವೀಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.11, ಕೊೖಲ ಗ್ರಾಮದ ಏಣಿತಡ್ಕ ಕಾಲೋನಿಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶಿರಾಡಿ ದೈವಸ್ಥಾನಕ್ಕೆ ಸುಳ್ಯ ಶಾಸಕ ಎಸ್.ಅಂಗಾರ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಇಲ್ಲಿನ ಬಿಜೆಪಿ ಮುಖಂಡ ಮಾತನಾಡಿ ಹಿಂದಿನ ಚುನಾವಣೆಯಲ್ಲಿ ಕಾರಣಿಕ ದೈವವಾದ ಏಣಿತಡ್ಕ ಶಿರಾಡಿ ದೈವಕ್ಕೆ ಶಾಸಕರ ಗೆಲುವಿಗೆ ಹರಕೆ ಹೇಳಲಾಗಿತ್ತು. ಜಿಲ್ಲೆಯಲ್ಲಿ ಎಲ್ಲಾ ಬಿಜೆಪಿ ಸಂಪೂರ್ಣ ನೆಕಚ್ಚಿದರೂ ಸುಳ್ಯ ಕ್ಷೇತ್ರದಲ್ಲಿ ಅಂಗಾರ ಅವರು ಶಾಸಕರಾಗಿ ಮತ್ತೆ ಆಯ್ಕೆಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ಶಾಸಕರು ಗೆಲ್ಲುವುದರೊಂದಿಗೆ ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ

ಏಣಿತಡ್ಕ ಶಿರಾಡಿ ದೈವಸ್ಥಾನಕ್ಕೆ ಶಾಸಕರ ಭೇಟಿ ► ಕಾಮಗಾರಿ ವೀಕ್ಷಣೆ Read More »

ಕರಾವಳಿ
Scroll to Top