ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ
(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಡಿಸೆಂಬರ್ 24 ನೇ ಭಾನುವಾರದಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಹೇಳಿದರು. ಅವರು ಶುಕ್ರವಾರ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕಡಬ ಶ್ರೀಕಂಠ ಸ್ವಾಮಿ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದ ಬಳಿಕ ಬ್ಯಾಂಕಿನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸಂಘದ ನೂತನ ಕಟ್ಟಡ ಸುಮಾರು ಎರಡು ಕೋಟಿ […]

